ಕೊಲಂಬೊ, ಎ24(Daijiworld News/SS): ಶ್ರೀಲಂಕಾದಲ್ಲಿ ಸಂಭವಿಸಿದ 8 ಸರಣಿ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಇವರ ಪೈಕಿ 45 ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಮನಕಲಕುವ ಅಂಕಿ ಅಂಶಗಳನ್ನು ವಿಶ್ವಸಂಸ್ಥೆ ಬಿಡುಗಡೆ ಮಾಡಿದೆ.
ಒಟ್ಟು 45 ಮಕ್ಕಳು ಸರಣಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಯೂನಿಸೆಫ್ ವಕ್ತಾರ ಕ್ರಿಸ್ಟೋಫೆ ಬೌಲಿಯಾರ್ಕ್ ಜಿನಿವಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಮಾತ್ರವಲ್ಲ, ಗಾಯಗೊಂಡಿರುವ ಮಕ್ಕಳು ಜೀವನ್ಮರಣದ ನಡುವೆ ಹೋರಾಡುತ್ತಿವೆ ಎನ್ನುವ ಮೂಲಕ ಮಕ್ಕಳ ಸಾವಿನ ಸಂಖ್ಯೆ ಹೆಚ್ಚುವ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.
ಉಗ್ರರು ನಡೆಸಿದ ದಾಳಿಯಲ್ಲಿ ಸುಮಾರು 500 ಮಂದಿ ಗಾಯಗೊಂಡಿದ್ದು, ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಈ ದುರ್ಘಟನೆಯಲ್ಲಿ ರಾಜ್ಯದಲ್ಲಿ 10 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ.