ಶ್ರೀಲಂಕಾ,ಏ25(Daijiworld News/AZM):ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದ ಹಿನ್ನಲೆ ಭಯೋತ್ಪಾದಕ ದಾಳಿಯ ಹೊಣೆ ಹೊತ್ತ ಶ್ರೀಲಂಕಾದ ರಕ್ಷಣಾ ಕಾರ್ಯದರ್ಶಿ ಹೇಮಸಿರಿ ಫೆರ್ನಾಂಡೊ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಾಯ್ಟರ್ಸ್ ಸುದ್ಧಿ ಸಂಸ್ಥೆಗೆ ತಿಳಿಸಿದ್ದಾರೆ.
ವೈಯಕ್ತಿಕವಾಗಿ ನನ್ನ ಕಡೆಯಿಂದ ಯಾವುದೇ ವೈಫಲ್ಯ ಸಂಭವಿಸಿಲ್ಲ, ಆದರೆ, ರಕ್ಷಣಾ ಕಾರ್ಯದರ್ಶಿಯಾಗಿ ನನ್ನ ನೇತೃತ್ವದ ಕೆಲವು ಸಂಸ್ಥೆಗಳ ವೈಫಲ್ಯಗಳಿಗೆ ನಾನು ಜವಾಬ್ದಾರಿ ವಹಿಸಿಕೊಳ್ಳುತ್ತೇನೆ ಎಂದು ಅವರು ಹೇಳಿದರು.
ಶ್ರೀಲಂಕಾದಲ್ಲಿ ಈಸ್ಟರ್ ದಿನ ಭಾನುವಾರದಂದು ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೆ ಇದೆ. ಈವರೆಗೆ 359 ಜನ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ದಾಳಿಗೆ ಸಂಬಂಧಿಸಿದಂತೆ 60 ಶಂಕಿತರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.