ಮಾಲೆ, ಮೇ.7(DaijiworldNews/AA): ಭಾರತ ಮತ್ತು ಮಾಲ್ಡೀವ್ಸ್ ನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ. ಹೀಗಾಗಿ ಮಾಲ್ಡೀವ್ಸ್ ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ಕುಸಿದಿದ್ದು, ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ಆರ್ಥಿಕತೆಯನ್ನು ಬೆಂಬಲಿಸಿ ಎಂದು ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಹೇಳಿದ್ದಾರೆ.
ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಐತಿಹಾಸಿಕ ಸಂಬಂಧಗಳ ಬಗ್ಗೆ ಮಾತನಾಡಿದ ಅವರು, ನಮಗೆ ಇತಿಹಾಸವಿದೆ. ಹೊಸದಾಗಿ ಚುನಾಯಿತರಾದ ನಮ್ಮ ಸರ್ಕಾರ ಕೂಡ ಭಾರತದೊಂದಿಗೆ ಕೆಲಸ ಮಾಡಲು ಬಯಸುತ್ತದೆ. ನಾವು ಯಾವಾಗಲೂ ಶಾಂತಿ ಮತ್ತು ಸೌಹಾರ್ದ ವಾತಾವರಣವನ್ನು ಉತ್ತೇಜಿಸುತ್ತೇವೆ. ನಮ್ಮ ಜನರು ಮತ್ತು ಸರ್ಕಾರವು ಭಾರತೀಯರ ಆಗಮನಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇವೆ ಎಂದಿದ್ದಾರೆ.
ಪ್ರವಾಸೋದ್ಯಮ ಸಚಿವನಾಗಿ, ದಯವಿಟ್ಟು ಮಾಲ್ಡೀವ್ಸ್ನ ಪ್ರವಾಸೋದ್ಯಮದ ಭಾಗವಾಗಿ ಎಂದು ನಾನು ಭಾರತೀಯರಿಗೆ ಹೇಳಲು ಬಯಸುತ್ತೇನೆ. ನಮ್ಮ ಆರ್ಥಿಕತೆಯು ಪ್ರವಾಸೋದ್ಯಮದ ಮೇಲೆ ಅವಲಂಬಿತವಾಗಿದೆ ಎಂದು ಅವರು ಹೇಳಿದ್ದಾರೆ.