ತನಾಹ್ ದಾತಾರ್, ಮೇ.14(DaijiworldNews/AA): ಪಶ್ಚಿಮ ಇಂಡೋನೇಷ್ಯಾದಲ್ಲಿ ಸಂಭವಿಸಿದ ಜ್ವಾಲಾಮುಖಿ ಸ್ಪೋಟದಿಂದ ಏಕಾಏಕಿ ಪ್ರವಾಹ ಉಂಟಾಗಿತ್ತು. ಈ ಪ್ರವಾಹದಲ್ಲಿ ಸಾವನನ್ನಪ್ಪಿದವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಹಾಗೂ 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶನಿವಾರ ಸಂಜೆ ಸುಮಾತ್ರಾ ದ್ವೀಪದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಜ್ವಾಲಾಮುಖಿ ಸ್ಫೋಟಗೊಂಡ ನಂತರ ಪ್ರವಾಹ ಉಂಟಾಗಿದ್ದು, ಈ ಪ್ರವಾಹದಿಂದಾಗಿ ರಸ್ತೆಗಳು, ಮನೆಗಳು ಜಲಾವೃತಗೊಂಡಿವೆ.
ಈ ಪ್ರವಾಹದಿಂದಾಗಿ ಭಾನುವಾರ 37 ಮಂದಿ ಮೃತಪಟ್ಟಿದ್ದರು. ಇದೀಗ ಇಂದು ಅವಶೇಷಗಳ ಅಡಿಯಲ್ಲಿ 50 ಶವಗಳು ಪತ್ತೆಯಾಗಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದೆ ಎಂದು ಪಶ್ಚಿಮ ಸುಮಾತ್ರಾ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿ ಇಲ್ಲಾಮ್ ವಹಾಬ್ ಹೇಳಿದ್ದಾರೆ. ಜೊತೆಗೆ ಈ ಭಾರಿ ಪ್ರವಾಹದಿಂದಾಗಿ 3 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪಶ್ಚಿಮ ಸುಮಾತ್ರಾ ಗವರ್ನರ್ ತಿಳಿಸಿದ್ದಾರೆ.