ಢಾಕಾ, ಆ.04(DaijiworldNews/AK): ಬಾಂಗ್ಲಾದೇಶದ ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದ್ದು, ಇದಕ್ಕೆ ಆಡಳಿತಾರೂಢ ಅವಾಮಿ ಲೀಗ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಸಂಘರ್ಷ ಭುಗಿಲೆದ್ದಿದ್ದು, 72 ಮಂದಿ ಮೃತಪಟ್ಟಿದ್ದಾರೆ.
ಬಾಂಗ್ಲಾ ಸಂಘರ್ಷದಿಂದಾಗಿ ದೇಶದಲ್ಲಿರುವ ಭಾರತೀಯರು ಆತಂಕಗೊಂಡಿದ್ದಾರೆ. ಬಾಂಗ್ಲಾದಲ್ಲಿರುವ ತನ್ನ ನಾಗರಿಕರಿಗೆ ಸಂಪರ್ಕದಲ್ಲಿ ಇರುವಂತೆ ಭಾರತೀಯ ರಾಯಭಾರಿ ಕಚೇರಿ ಸೂಚನೆ ನೀಡಿದೆ.
ಭಾರತದ ಸಹಾಯಕ ಹೈ ಕಮಿಷನ್, ಸಿಲ್ಹೆಟ್ನ ಅಧಿಕಾರ ವ್ಯಾಪ್ತಿಯಲ್ಲಿ ವಾಸಿಸುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳು ಈ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ವಿನಂತಿಸಲಾಗಿದೆ. ಎಚ್ಚತ್ತೆಕೊಳ್ಳಲು ಸೂಚಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ +88-01313076402 ಅನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಸರ್ಕಾರಿ ಉದ್ಯೋಗ ಕೋಟಾ ಕುರಿತಾದ ಪ್ರತಿಭಟನೆಗಳು ಮತ್ತೆ ಪುನರಾರಂಭಗೊಂಡಿವೆ. ಮೃತರಲ್ಲಿ ಹದಿನಾಲ್ಕು ಮಂದಿ ಪೊಲೀಸರು ಸೇರಿದ್ದಾರೆ.