ನವದೆಹಲಿ, ಆ.11 (DaijiworldNews/AK):ಉಕ್ರೇನ್ನಲ್ಲಿ ರಷ್ಯಾ ನಡೆಸುತ್ತಿರುವ ವಿಶೇಷ ಸೇನಾ ಕಾರ್ಯಾ ಚರಣೆಯಲ್ಲಿ ಭಾರತೀಯ ಪ್ರಜೆಗಳು ಮೃತಪಟ್ಟಿರುವುದು ದುರದೃಷ್ಟಕರ ಎಂದು ರಷ್ಯಾದ ರಾಯಭಾರ ಕಚೇರಿ ಸಂತಾಪ ಸೂಚಿಸಿದೆ. ರಷ್ಯಾದ ಸಶಸ್ತ್ರ ಪಡೆಗಳಿಗೆ ಭಾರತೀಯರ ನೇಮಕಾತಿಯನ್ನು ನಿಲ್ಲಿಸಲಾಗಿದೆ
ಎಂದು ಹೇಳಿದೆ.
ರಷ್ಯಾ ಸೇನೆಗೆ ಸೇರಲು ಸ್ವಯಂ ಪ್ರೇರಣೆಯಿಂದ ಒಪ್ಪಂದಕ್ಕೆ ಸಹಿ ಹಾಕಿರುವ ಮತ್ತು ಭಾರತಕ್ಕೆ ಮರಳಲು ಬಯಸುವ ಭಾರತೀಯ ಪ್ರಜೆಗಳ ಗುರುತಿಸುವಿಕೆ ಮತ್ತು ಬಿಡುಗಡೆಗೊಳಿಸುವಿಕೆಗೆ ಸಂಬಂಧಿಸಿ ಉಭಯ ದೇಶಗಳು ನಿಕಟ ಸಮನ್ವಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ರಾಯಭಾರ ಕಚೇ ರಿ ಪ್ರಕಟಣೆಯಲ್ಲಿ ತಿಳಿಸಿದೆ.
ರಷ್ಯಾದ ರಕ್ಷಣಾ ಸಚಿವಾಲಯವು ಈ ವರ್ಷದ ಏಪ್ರಿಲ್ನಿಂ ದ ಭಾರತ ಸೇ ರಿದಂತೆ ಇತರೆ ದೇ ಶಗಳ ನಾಗರಿಕರನ್ನು ಸೇ ನೆಗೆ ನೇ ಮಕಮಾಡಿಕೊಳ್ಳುವುದನ್ನು
ನಿಲ್ಲಿಸಿದೆ ಎಂ ದು ಅಲ್ಲಿನ ರಾಯಭಾರ ಕಚೇರಿ ಮಾಹಿತಿ ನೀ ಡಿದ್ದಾರೆ.
ರಷ್ಯಾ ರಾಯಭಾರ ಕಚೇ ರಿಯು ಭಾರತ ಸರ್ಕಾ ರ ಮತ್ತು ಮೃತರ ಕುಟುಂ ಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸ್ತುತ 69 ಭಾರತೀಯ ಪ್ರಜೆಗಳು ರಷ್ಯಾದ ಸೇನೆಯಿಂದ ಬಿಡುಗಡೆಗಾಗಿ ಕಾಯುತ್ತಿದ್ದಾರೆ ಎಂದು ವಿದೇ ಶಾಂ ಗ ಸಚಿವ ಎಸ್. ಜೈ ಶಂ ಕರ್ ಶುಕ್ರವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.