ಢಾಕಾ, ಆ.13(DaijiworldNews/AA): ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆ ವೇಳೆ ಕಿರಾಣಿ ಅಂಗಡಿಯ ಮಾಲೀಕ ಸಾವನ್ನಪ್ಪಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಶೇಖ್ ಹಸೀನಾ ಅವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಮೊಹಮ್ಮದ್ಪುರದಲ್ಲಿ ಉದ್ಯೋಗ ಕೋಟಾ ಸುಧಾರಣಾ ಆಂದೋಲನವನ್ನು ಬೆಂಬಲಿಸುವ ಮೆರವಣಿಗೆಯಲ್ಲಿ ಜುಲೈ 19ರಂದು ಪೊಲೀಸ್ ಗುಂಡಿನ ದಾಳಿಯಲ್ಲಿ ಕಿರಾಣಿ ಅಂಗಡಿ ಮಾಲೀಕ ಅಬು ಸೈಯದ್ ಅವರು ಸಾವನ್ನಪ್ಪಿದ್ದರು. ಇದೀಗ ಅವರ ಹಿತೈಷಿ ಶೇಖ್ ಹಸೀನಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇನ್ನು ಶೇಖ್ ಹಸೀನಾ ಅವರೊಂದಿಗೆ ಅವಾಮಿ ಲೀಗ್ನ ಪ್ರಧಾನ ಕಾರ್ಯದರ್ಶಿ ಒಬೈದುಲ್ ಕ್ವಾಡರ್, ಮಾಜಿ ಗೃಹ ಸಚಿವ ಅಸಾದುಝಮಾನ್ ಖಾನ್ ಕಮಾಲ್ ಮತ್ತು ಮಾಜಿ ಪೊಲೀಸ್ ಮಹಾನಿರೀಕ್ಷಕ ಚೌಧುರಿ ಅಬ್ದುಲ್ಲಾ ಅಲ್ ಮಾಮುನ್ ಸೇರಿದಂತೆ ಇತರರ ವಿರುದ್ಧವೂ ಪ್ರಕರಣ ದಾಖಲಾಗಿರುತ್ತದೆ.
ಕಿರಾಣಿ ಅಂಗಡಿಯ ಮಾಲೀಕನ ಸಾವಿನ ಮಧ್ಯೆ ಉದ್ಯೋಗ ಕೋಟಾದ ವ್ಯಾಪಕ ಪ್ರತಿಭಟನೆಯ ಸಂದರ್ಭದಲ್ಲಿ ರಾಜೀನಾಮೆ ನೀಡಿ ಶೇಖ್ ಹಸೀನಾ ಅವರು ಬಾಂಗ್ಲಾದಿAದ ಭಾರತಕ್ಕೆ ಪಲಾಯನ ಮಾಡಿದ್ದರು. ಹೀಗಾಗಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.