ಕುಂದಾಪುರ, ಸೆ.27(DaijiworldNews/AK): ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರ ಸೆ.27 ರಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು.

ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.2008ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.ಈ ಕ್ಷೇತ್ರದಲ್ಲಿ ಮೂರು ಭಾರಿ ಸ್ಪರ್ಧಿಸಿ ಎರಡು ಭಾರಿ ಸೋತಿದ್ದರು.
ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.