ಸುಳ್ಯ, ನ.01(DaijiworldNews/TA):ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಸುಳ್ಯ ತಹಶೀಲ್ದಾರ್ ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಶಾಸಕಿ ಭಾಗೀರಥಿ ಮುರುಳ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.“ನಾವು ಕನ್ನಡವನ್ನೇ ಮಾತನಾಡಬೇಕು. ವ್ಯವಹರಿಸಬೇಕು. ಇದರ ಜತೆಗೆ ನಮ್ಮ ಆಚಾರ ವಿಚಾರದಲ್ಲೂ ಕನ್ನಡದ ಸೊಬಗು ಇರಬೇಕು. ಅದು ದೀಪಾವಳಿ ಹಬ್ಬದಂತೆ ನಿರಂತರ ಬೆಳಗಬೇಕು” ಎಂದು ಹೇಳಿದರು.
ಸುಳ್ಯನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಸುಳ್ಯ ಎ.ಒ.ಎಲ್.ಇ. ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ಸರಕಾರಿ ನೌಕರರ ಸಂಘದ ಅಧ್ಯಕ್ಷೆ ಧನಲಕ್ಷ್ಮೀ ಕುದ್ದಾಜೆ, ಎ.ಸಿ.ಎಫ್. ಪ್ರವೀಣ್ ಕುಮಾರ್ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ. ಮುಂತಾದವರು ವೇದಿಕೆಯಲ್ಲಿದ್ದರು.