ಉಳ್ಳಾಲ, ನ.24(DaijiworldNews/AA): ಸೋಮೇಶ್ವರ ಇಲ್ಲಿನ ರುದ್ರಬಂಡೆಯಿಂದ ಸಮುದ್ರಕ್ಕೆ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದಾಳೆ. ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿರುವ ಆಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ರಕ್ಷಿಸಲಾಗಿದೆ. ಸದ್ಯ ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.