ಕಾರ್ಕಳ, ನ.24(DaijiworldNews/AK):ಖಾಸಗಿ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸಾವನ್ನಪ್ಪಿದ ಭೀಕರ ಅಪಘಾತ ಮಿಯಾರು ಜೋಡುಕಟ್ಟೆ ಎಂಬಲ್ಲಿ ಶನಿವಾರ ನಡೆದಿದೆ.
ಮೃತರನ್ನು ಕರಲಗುಡ್ಡೆ ಸುರೇಖಾ ನಗರದ ನಿವಾಸಿ 26 ವರ್ಷದ ಅಜಿತ್ ಕುಮಾರ್ ಎಂದು ಗುರುತಿಸಲಾಗಿದೆ.
ಈ ವೇಳೆ ವಿದ್ಯಾರ್ಥಿಗಳಿಂದ ಖಾಲಿ ಇದ್ದ ಶಾಲಾ ಬಸ್ ಪ್ರಯಾಣಿಸುತ್ತಿದ್ದಾಗ ಬೈಕ್ ಸವಾರ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ. ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.