ಮಂಗಳೂರು,ಡಿ.02(DaijiworldNews/AK): ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಇಬ್ಬರು ಮುಖಂಡರ ನಡುವೆ ಹೊಡೆದಾಟ ನಡೆದಿದೆ.
ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದ ಘಟನೆ ಮಲ್ಲಿಕಟ್ಟೆ ಬಳಿ ಇರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದಿದೆ.
ಮೊದಲಿಗೆ ಕಾಂಗ್ರೆಸ್ ಮುಖಂಡ ಪ್ರಕಾಶ್ ಶೆಟ್ಟಿ ತುಂಬೆಗೆ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ಕುಮಾರ್ ಹೊಡೆದಾಡಿಕೊಂಡಿದ್ದಾರೆ. ಇದೇ ವೇಳೆ, ತಿರುಗಿಸಿ ಹರೀಶ್ಗೆ ಹೊಡೆಯಲು ಪ್ರಕಾಶ್ ಶೆಟ್ಟಿ ಮುಂದಾಗಿದ್ದಾರೆಂದು ಎಂದು ತಿಳಿದು ಬಂದಿದೆ.
ಉಭಯ ನಾಯಕರ ತಂಡದ ಕಾರ್ಯಕರ್ತರು ಜಮಾಯಿಸಿದ್ದು ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ.