ಕಡಬ, ಡಿ.02(DaijiworldNews/AK):ಕಾಣೆಯಾದ ಸಂದೀಪ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಾಡಲ್ಲಿ ಪತ್ತೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ ರೊಡ್ ಬಳಿ ನಾರಡ್ಕ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ.
ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪೊಲೀಸರು ಬಾಯಿಬಿಡಿಸಿದಾಗ ಸತ್ಯ ಹೊರ ಬಂದಿದೆ. ಆರೋಪಿ ಪ್ರತೀಕ್ ಕೊಲೆ ಮಾಡಿ ಮೃತದೇಹವನ್ನು ಬಿಸಾಡಿದ್ದನು ತೋರಿಸಿದ್ದಾನೆ. ಪೆಟ್ರೋಲ್ ಸುರಿದು ಮೃತದೇಹಕ್ಕೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.
ಕಡಬದ ಬಿಳಿನೆಲೆ ಗ್ರಾಮದ ಮುಂಗ್ಲಿ ಮಜಲು ನಿವಾಸಿ ಸಂದೀಪ್ (29) ಕಳೆದ ನ.27ರಿಂದ ನಾಪತ್ತೆಯಾಗಿದ್ದ. ಮುರ್ದಾಳದಲ್ಲಿ ಸಂದೀಪ್ ಶಾಮಿಯಾನ ಕೆಲಸ ಮಾಡಿಕೊಂಡಿದ್ದ.