ಪುತ್ತೂರು, ಡಿ.22(DaijiworldNews/AA): ಎಲೆಕ್ಟಿಕ್ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಬೈಪಾಸ್ ನಲ್ಲಿ ಇಂದು ನಡೆದಿದೆ.
ರಿಕ್ಷಾ ಚಾಲಕ ಸೂರ್ಯ ಮೃತ ದುರ್ದೈವಿ.
ಸೂರ್ಯ ಅವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ನಾಯಿಯೊಂದು ಅಡ್ಡ ಬಂದಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ ಎನ್ನಲಾಗಿದೆ.
ಕೂಡಲೇ ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಚಾಲಕ ಸೂರ್ಯ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಸೂರ್ಯ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.