ಉಡುಪಿ, ಫೆ.25 (DaijiworldNews/AA): ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಗಿರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಲೇಖಿರಾಜ್ ಅವರು ಆಯತಪ್ಪಿ ಕಟ್ಟಡದ ೧೪ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಯುವಕನ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.