ಮಂಗಳೂರು, ಫೆ.26(DaijiworldNews/TA): ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದೇಶಾದ್ಯಂತ ಸಡಗರ ಸಂಭ್ರಮ ಮುಗಿಲುಮುಟ್ಟಿದ್ದು, ಈ ನಡುವೆ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಳಯದಲ್ಲಿ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.

ಜಿಲ್ಲೆ ಮಾತ್ರವಲ್ಲದೆ ಹೊರಜಿಲ್ಲೆ ಹಾಗೂ ರಾಜ್ಯಗಳಿಂದಲೂ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದರು. ಮುಂಜಾನೆಯಿಂದಲೂ ದೇವರ ದರ್ಶನ ಪಡೆಯಲು ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು.
ಈ ವೇಳೆ ಪ್ರತಿಕ್ರಿಯೆ ನೀಡಿರುವ ಕದ್ರಿ ಮಂಜುನಾಥ ದೇಗುಲದ ಮಾಜಿ ಟ್ರಸ್ಟಿ ಚಂದ್ರಕಲಾ ದೀಪಕ್ ರಾವ್, ಬೆಳಗ್ಗೆಯಿಂದ ಗುರುವಾರ ಮುಂಜಾನೆ ವರೆಗೂ ಭಕ್ತರು ತಮ್ಮನ್ನು ತಾವು ಭಕ್ತಿಯಿಂದ ತೊಡಗಿಸಿಕೊಂಡು, ಜಾಗರಣೆಯಲ್ಲಿ ಇರುತ್ತಾರೆ. ಹಲವು ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಶಿವರಾತ್ರಿ ಹಿನ್ನೆಲೆಯಲ್ಲಿ ಮಂಗಳೂರಿನ ಕುದ್ರೋಳಿ ದೇಗುಲದಲ್ಲೂ ವಿಶೇಷ ಪೂಜೆ ನಡೆದಿದ್ದು, ಭಕ್ತರ ಸಂಖ್ಯೆ ಕೂಡ ಹೆಚ್ಚಿತ್ತು.