ಉಡುಪಿ, ಮಾ.02(DaijiworldNews/TA) : ಡಿಕೆ ಶಿವಕುಮಾರ್ ಗೆ ಪ್ರಥಮ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದವ ನಾನು. ಇವತ್ತು ಯಶಸ್ವಿ ನಾಯಕ ರಾಗಿ ಡಿಕೆಶಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಹೇಳಿಕೆ ನೀಡಿದ್ದಾರೆ.

ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಅವರು ಈ ಹೇಳಿಕೆ ನೀಡಿದ್ದು, ಸದ್ಯ ರಾಜ್ಯ ರಾಜಕೀಯ ವಲಯದಲ್ಲಿ ಮತ್ತೆ ಸಿಎಂ ಬಗ್ಗೆ ಚರ್ಚೆ ಆರಂಭವಾಗಿದೆ. ಕಾರ್ಕಳ ಗೊಮ್ಮಟೇಶ್ವರನ ಪುಣ್ಯಭೂಮಿ. ಅವರು ಗೊಮ್ಮಟೇಶ್ವರನ ತರ ಬೆಳೆಯಲಿ.
ಡಿಕೆಶಿ ಅವರು ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕ. ಡಿಕೆಶಿ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರು ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಮೊಯ್ಲಿ ತಿಳಿಸಿದರು.