ಉಡುಪಿ, ಮಾ.03(DaijiworldNews/TA): ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾಗುವ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಎಲ್ಲದಕ್ಕೂ ಮುಂದೆ ಕಾದು ನೋಡ್ತಾ ಇರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಉಡುಪಿಯಲ್ಲಿ ಮಾತನಾಡಿದ ಅವರು, ಈಶಾ ಫೌಂಡೇಶನ್ ವತಿಯಿಂದ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಡಿಕೆಶಿ ಅವರು ಕೇಂದ್ರ ಗೃಹ ಸಚಿವರೊಂದಿಗೆ ವೇದಿಕೆ ಹಂಚಿಕೊಂಡಿದ್ದು, ಬಹಳಷ್ಟು ಅರ್ಥ ಕಲ್ಪಿಸಿಕೊಳ್ಳುವಂಥ ಪ್ರಯತ್ನಗಳು ನಡೆಯುತ್ತಿದೆ.
ಆದರೆ ನನಗೆ ಮಾತ್ರ ಆ ರೀತಿ ಅನಿಸುತ್ತಿಲ್ಲ ಎಂದು ತಿಳಿಸಿದ ಅವರು 9 ವಿಶ್ವವಿದ್ಯಾನಿಲಯಗಳಿಗೆ ಅನುದಾನ ನೀಡಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ತೆರೆದಿದ್ದ ವಿ.ವಿಗಳನ್ನೇ ರಾಜ್ಯ ಸರ್ಕಾರ ಮುಚ್ಚಿಹಾಕಿದೆ. ಎಲ್ಲಾ ವಿಚಾರಗಳನ್ನು ಸದನದಲ್ಲಿ ಚರ್ಚೆ ಮಾಡಲಿದ್ದೇವೆ ಎಂದು ಹೇಳಿದರು.