ಬಂಟ್ವಾಳ, ಮಾ.04(DaijiworldNews/AK):ಜನತಾ ದರ್ಶನ ಕಾರ್ಯಕ್ರಮಕ್ಕೆ ಕೃಷ್ಣವೇಣಿ ಗೈರು ಹಿನ್ನೆಲೆ ಗಣಿ ಇಲಾಖೆ ಅಧಿಕಾರಿ ಕೃಷ್ಣವೇಣಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.

ಕೃಷ್ಣವೇಣಿ ಅವರು ಯಾವುದೇ ಪೂರ್ವಾನುಮತಿ ಇಲ್ಲದೆ ಗೈರು ಹಾಜರಾಗಿದ್ದಾರೆ. ಹೀಗಾಗಿ ಉಸ್ತುವರಿ ಸಚಿವ ದಿನೇಶ್ ಗುಂಡೂರಾವ್ ಶಿಸ್ತು ಕ್ರಮಕ್ಕಾಗಿ ಸೂಚನೆ ನೀಡಿದ್ದಾರೆ.
ಫೆ. ೫ ರಂದು ಬಂಟ್ವಾಳ ತಾಲೂಕಿನಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ಅವರು ಗಣಿ ಮತ್ತು ಭೂ ವಿಜ್ನಾನ ಇಲಾಖೆಯಡಿ ಬರುವ ಸಾರ್ವಜನಿಕ ದೂರಿಗೆ ಸ್ಪಂದಿಸುವ ಸಂದರ್ಭದಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೆ ಗೈರು ಹಾಜರಾಗಿದ್ದರು.