ಮಂಗಳೂರು, ಮಾ.05(DaijiworldNews/TA): ಜಿಲ್ಲಾ ಕಾರಾಗೃಹದಲ್ಲಿ ಬುಧವಾರ ಸಂಜೆ 30 ಕ್ಕೂ ಹೆಚ್ಚು ವಿಚಾರಣಾಧೀನ ಖೈದಿಗಳು ಅಸ್ವಸ್ಥರಾದರು. ಆಹಾರದಲ್ಲಾದ ದೋಷವೇ ಇದಕ್ಕೆ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಬಾಧಿತ ಖೈದಿಗಳನ್ನು ಆಂಬ್ಯುಲೆನ್ಸ್ಗಳಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.



ಫುಡ್ ಪಾಯಿಸನ್ ಆಗಿ ಹೊಟ್ಟೆ ನೋವಿನಿಂದ 15 ಕೈದಿಗಳು ನರಳಾಡಿದ್ದಾರೆ ಎನ್ನಲಾಗಿದೆ. ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆ ನೋವಿನಿಂದ ಕೈದಿಗಳು ಬಳಲಿದ್ದು ಬಳಿಕ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕೈದಿಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಸ್ವಸ್ಥ ಕೈದಿಗಳನ್ನ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಜೈಲಿನಲ್ಲಿ ಪೊಲೀಸರ ವಿರುದ್ಧ ಕೈದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.