ಬಂಟ್ವಾಳ,ಮಾ.07(DaijiworldNews/TA): ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಹಲವು ದಿನ ಕಳೆದರೂ ಯಾವುದೇ ಮಾಹಿತಿಗಳು ಹೊರಬಾರದಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳೂರಿನ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.




ದಿಗಂತ್ ನಾಪತ್ತೆಯಾಗಿ ಹಲವು ದಿನಗಳು ಕಳೆದಿದ್ದರೂ ಪೊಲೀಸ್ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ ಎಂದು ಆರೋಪಿಸಿದ ಕಾರ್ಯಕರ್ತರು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಉತ್ತರ ನೀಡಬೇಕೆಂದು ಆಗ್ರಹಿಸಿದರು.
ಬಳಿಕ ಸ್ಥಳಕ್ಕೆ ಸ್ಪೆಶಲ್ ಬ್ರಾಂಚ್ ಅಧಿಕಾರಿಯೊಬ್ಬರು ಭೇಟಿ ನೀಡಿ ಸೂಕ್ತ ರೀತಿಯ ತನಿಖೆ ನಡೆಸುತ್ತಿರುವ ಬಗ್ಗೆ ತಿಳಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂದಕ್ಕೆ ತೆಗೆದುಕೊಳ್ಳಲಾಯಿತು.