ಕುಂದಾಪುರ, ಮಾ.08 (DaijiworldNews/AA): ಮೂಡ್ಲಕಟ್ಟೆ ತಾಂತ್ರಿಕ ಸಂಸ್ಥೆ, ಕುಂದಾಪುರವು ಮೊದಲ ಮತ್ತು ಎರಡನೇ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆಯೋಜಿಸಿತ್ತು.


ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂ, ನಮ್ಮ ಭೂಮಿ ಕ್ಷೇತ್ರದ ಕಾರ್ಯಕ್ರಮದ ಸಹಾಯಕ ನಿರ್ದೇಶಕಿ ಕೃಪಾ ಎಂ.ಎಂ, ನಮ್ಮ ಭೂಮಿಯ ಸುರೇಶ್ ಮತ್ತು ಆಶಾ ಉಪಸ್ಥಿತರಿದ್ದರು. ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ವೇದಿಕೆಯಲ್ಲಿದ್ದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ವಿದ್ಯಾರ್ಥಿಗಳಿಗೆ ಮಹಿಳಾ ಸಬಲೀಕರಣದ ಬಗ್ಗೆ ಅರಿವು ಮೂಡಿಸಿದರು ಮತ್ತು ಸಮಾಜದಲ್ಲಿ ಮಹಿಳೆಯರಿಗೆ ಪುರುಷರಷ್ಟೇ ಸಮಾನ ಹಕ್ಕುಗಳನ್ನು ಹೊಂದಿರಬೇಕು ಎಂದು ಒತ್ತಿ ಹೇಳಿದರು. ಎಂಬಿಎ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಮೊದಲ ವರ್ಷದ ಎಂಬಿಎ ವಿದ್ಯಾರ್ಥಿನಿ ಗೌತಮಿ ನಿರೂಪಿಸಿದರು.