ಉಡುಪಿ, ಮಾ.11 (DaijiworldNews/AA): ಉಡುಪಿ ತಾಲೂಕಿನ ಮಣಿಪುರ ಗ್ರಾಮದ ದೆಂದೂರ್ಕಟ್ಟೆಯ ಬಾರ್ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಅಶೋಕ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಬಾರ್ ಬಳಿಯ ಪೊದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ.
ಮಾಹಿತಿ ತಿಳಿದ ನಂತರ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮತ್ತು ಸ್ಥಳೀಯ ನಿವಾಸಿಗಳು ಅವರನ್ನು ಅಜ್ಜರಕಾಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆ ವ್ಯಕ್ತಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ವ್ಯಕ್ತಿಯ ಸಾವಿನ ಕಾರಣವನ್ನು ತಿಳಿಯಲು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.