ಮಂಗಳೂರು, ಮಾ.11 (DaijiworldNews/AA): ಪ್ರತಿ ವರ್ಷ ನಡೆಯುವ ರಾಣಿ ಅಬ್ಬಕ್ಕ ಉತ್ಸವಕ್ಕೆ ಅನುದಾನ ನೀಡಬೇಕೆಂದು ಶಾಸಕ ಕೆ. ಗೋಪಾಲಯ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.













ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲ ವೀರರಾಣಿ ಅಬ್ಬಕ್ಕ ನೆನಪಿಗಾಗಿ ರಾಣಿ ಅಬ್ಬಕ್ಕ ಪ್ರತಿಷ್ಠಾನ ಹಾಗೂ ಜಾರ್ಜ್ ಫರ್ನಾಂಡೀಸ್ ವೇದಿಕೆ ಜಂಟಿಯಾಗಿ ಮಹಾಲಕ್ಷ್ಮೀ ಲೇಔಟ್ನಲ್ಲಿ ಭಾನುವಾರ ಆಯೋಜಿಸಿದ್ದ ರಾಣಿ ಅಬ್ಬಕ್ಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಅನುದಾನ ಸಂಬಂಧ ಸದ್ಯದಲ್ಲೇ ಸಭಾಧ್ಯಕ್ಷರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಮಹಾಲಕ್ಷ್ಮೀ ಲೇಔಟ್ನಲ್ಲಿ ಉಳ್ಳಾಲ ರಾಣಿ ಅಬ್ಬಕ್ಕ ಹೆಸರಿನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಬೇಕಾದರೆ ಸಾಕಷ್ಟು ಕಷ್ಟ ಪಟ್ಟಿದ್ದೇನೆ ಎಂದರು.
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಬೇಕು ಎಂದರು. ಇಡೀ ದಿನ ಕ್ರೀಡೋತ್ಸವ ಸೇರಿ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದವು. ರಾಣಿ ಅಬ್ಬಕ್ಕ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಮಹಿಳೆಯರಿಗೆ, ಪುರುಷರಿಗೆ ವಿವಿಧ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.
ಮಹಾಲಕ್ಷ್ಮೀ ಲೇಔಟ್ನಲ್ಲಿ ಭಾನುವಾರ ಆಯೋಜಿಸಿದ್ದ ರಾಣಿ ಅಬ್ಬಕ್ಕ ಉತ್ಸವ ಕಾರ್ಯಕ್ರಮದಲ್ಲಿ ಅನಿತಾ ಸುರೇಂದ್ರಕುಮಾರ್ ಅವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೆ. ಗೋಪಾಲಯ್ಯ, ತೇಜಸ್ವಿನಿ ಅನಂತ್ಕುಮಾರ್, ಕೆ.ವಿ. ರಾಜೇಂದ್ರ ಕುಮಾರ್, ಡಾ. ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.
ರಾಣಿ ಅಬ್ಬಕ್ಕ ವಂಶಸ್ಥರಾದ ಅನಿತಾ ಸುರೇಂದ್ರಕುಮಾರ್, ಹೇಮಲತಾ ಗೋಪಾಲಯ್ಯ, ಪುತ್ತೂರು ಶಾಸಕ ಅಶೋಕ್ ರೈ, ಕಾರ್ಮಿಕ ಮುಖಂಡ ಫೆಲಿಕ್ಸ್ ಡಿಸೋಜಾ, ಮಾಜಿ ಉಪ ಮೇಯರ್ ಎಸ್. ಹರೀಶ್, ಅಖಿಲ ಭಾರತ ತುಳು ಒಕ್ಕೂಟ ಮಾಜಿ ಅಧ್ಯಕ್ಷ ಧರ್ಮಪಾಲ್ ದೇವಾಂಗ, ರಾಣಿ ಚನ್ನಮ್ಮ ಪ್ರತಿಷ್ಠಾನ ಅಧ್ಯಕ್ಷ ಕೆ.ವಿ. ರಾಜೇಂದ್ರ ಕುಮಾರ್, ವೈದ್ಯ ಡಾ. ಬಲ್ಲಾಳ್ ಮತ್ತಿತರರಿದ್ದರು.
ಇದೇ ವೇಳೆ ಅನಿತಾ ಸುರೇಂದ್ರಕುಮಾರ್ ಮತ್ತು ತೇಜಸ್ವಿನಿ ಅನಂತ್ಕುರ್ಮಾ ಅವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮಾಡಲಾಯಿತು.