ಕುಂದಾಪುರ, ಮಾ.17 (DaijiworldNews/AA): ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ವೊಂದು ಟಿಪ್ಪರ್ ಕೆಳಗೆ ಸಿಲುಕಿಕೊಂಡಿದ್ದು, ಅದೃಷ್ಟವಶಾತ್ ಸ್ಕೂಟರ್ನಲ್ಲಿದ್ದ ಮಹಿಳೆ ಮತ್ತು ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ಸೋಮವಾರ ನಡೆದಿದೆ.



ಕಾರು ಸ್ಕೂಟರ್ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಗೆ ತಳ್ಳಿದಾಗ ಈ ಅವಘಡ ಸಂಭವಿಸಿದೆ. ಕಾರಿನ ಡಿಕ್ಕಿಯ ರಭಸಕ್ಕೆ ಸ್ಕೂಟರ್ ನಿಂತಿದ್ದ ಟಿಪ್ಪರ್ ಟ್ರಕ್ನ ಚಕ್ರಗಳ ಕೆಳಗೆ ಸಿಲುಕಿಕೊಂಡಿದೆ ಎಂದು ತಿಳಿದುಬಂದಿದೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.