ಉಡುಪಿ, ಏ. 01(DaijiworldNews/TA): ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಪೂರ್ಣ ಉಡುಪಿ ಜಿಲ್ಲೆ ಇದೆಯೇ ಇಲ್ಲವೇ ಎಂಬ ರೀತಿಯಲ್ಲಿ ಬಜೆಟ್ ಮಂಡನೆ ಮಾಡಿದೆ. ಬಜೆಟ್ ನಲ್ಲಿ ದಕ್ಷಿಣ ಕನ್ನಡ ,ಉಡುಪಿ ಜಿಲ್ಲೆಯನ್ನು ಕಡೆಗಣಿಸಿದೆ. ಸಿದ್ದರಾಮಯ್ಯನವರಿಗೆ ಕರಾವಳಿಯ ಹಿಂದುತ್ವದ ದ್ವೇಷವೇ ಅಥವಾ 75 ರ ಪ್ರಾಯ ದೋಷ ಎಂಬುದು ತಿಳಿದಿಲ್ಲ. ಉಡುಪಿ ಜಿಲ್ಲೆಯನ್ನು ಈಗ ಸಂಪೂರ್ಣ ಮರೆತುಬಿಟ್ಟಿದ್ದಾರೆ ಎಂದು ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಜಾಥಾ ಜಿಲ್ಲಾ ಬಿಜೆಪಿ ಕಚೇರಿಯಿಂದ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ವರೆಗೆ ನಡೆಯಿತು. ಬಳಿಕ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕರು ಸರ್ಕಾರದ ವಿರುದ್ಧ ಹರಿಹಾಯ್ದರು.
ಉಡುಪಿ ಚಿಕ್ಕಮಂಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮುಖ್ಯಮಂತ್ರಿಗಳು ಸಚಿವ ಸಂಪುಟಗಳು ಬಡ ಜನರ ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು. ಬಡ ಜನರಿಗೆ ಬೇಕಾದಂತಹ ಬದುಕನ್ನು ಕಟ್ಟಿಕೊಡಬೇಕಿತ್ತು ಆದ್ರೆ ಸರ್ಕಾರ ಅದ್ಯಾವುದು ಮಾಡಿಲ್ಲ. ಈ ಸರ್ಕಾರ ಒಂದೇ ಒಂದು ಮನೆ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ನೀಡಿರುವ ಮನೆಯನ್ನು ಬಿಡುಗಡೆ ಮಾಡಿಲ್ಲ. ಆಡಳಿತದ ವಿಫಲತೆಯನ್ನು ಇಡೀ ಕರ್ನಾಟಕ ರಾಜ್ಯವನ್ನು ಕಾಡುತ್ತಿದೆ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಎಂದವರನ್ನು ರಕ್ಷಣೆ ಮಾಡುತ್ತೀರಿ ಎಂದಾದರೆ ಈ ಸರ್ಕಾರ ಎಂತಹ ದುರದೃಷ್ಟಕರ ಆಡಳಿತ ನಡೆಸುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ,, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಮೊದಲದ ಬಿಜೆಪಿ ಮುಖಂಡರು ಭಾಗವಹಿಸಿದ್ದರು.