ಸುಳ್ಯ, ಏ. 01(DaijiworldNews/TA): ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕಾಲಾವದಿ ಜಾತ್ರೋತ್ಸವ ಏ.13ರಿಂದ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಎಪ್ರಿಲ್ 1ರಂದು ಬೆಳಿಗ್ಗೆ 9 ಗಂಟೆಗೆ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.


ಈ ಸಂದರ್ಭಗಳಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ, ದೇವಳದ ವ್ಯವಸ್ಥಾಪಕ ಆನಂದ ಕಲ್ಲಗದ್ದೆ ಸೇರಿದಂತೆ ದೇವಳದ ಸಿಬ್ಬಂದಿ ಉಪಸ್ಥಿತರಿದ್ದರು.