ಮಂಗಳೂರು, ಏ.02 (DaijiworldNews/AK):ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ನಿರ್ದೇಶಕ ಫಾ.ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಬಿಡುಗಡೆಗೊಳಿಸಿದರು.








ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ ಎ.3, 4, 5ರಂದು ನಗರದ ಫಾದರ್ ಮುಲ್ಲರ್ ಕನ್ವೆನ್ಸನ್ ಸೆಂಟರ್ನಲ್ಲಿ ನಡೆಯಲಿದೆ ಎಂದು ಸಂಸ್ಥೆ ನಿರ್ದೇಶಕ ಫಾ.ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಹೇಳಿದರು.
ಏ.3ರಂದು ಬೆಳಗ್ಗೆ 10ಕ್ಕೆ ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಪದವಿ ಪ್ರದಾನ ಸಮಾರಂಭ ನಡೆಯಲಿದೆ. ಸಂತ ಅಲೋಶಿಯಸ್ ವಿವಿ ಕುಲಪತಿ ಡಾ.ಪ್ರವೀಣ್ ಮಾರ್ಟಿಸ್ ಮತ್ತು ಕೋಲ್ಕತದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೋಮಿಯೋಪಥಿ ಮಾಜಿ ನಿರ್ದೇಶಕ ಡಾ.ಸುಭಾಷ್ ಸಿಂಗ್ ಭಾಗವಹಿಸಲಿದ್ದಾರೆ. ಮಂಗಳೂರು ಬಿಷಪ್, ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ಅಧ್ಯಕ್ಷ ಡಾ.ಪೀಟರ್ ಪಾವ್ ಸಲ್ದಾನಾ ಅಧ್ಯಕ್ಷತೆ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಫಾದರ್ ಮುಲ್ಲರ್ ಫಿಸಿಯೋಥೆರಪಿ ಕಾಲೇಜಿನ ಪದವಿ ಪ್ರದಾನ ಸಮಾರಂಭ ಏ.4ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಪತಿ ಡಾ.ಭಗವಾನ್ ಬಿ.ಸಿ. ಭಾಗವಹಿಸಲಿದ್ದಾರೆ. ಮಂಗಳೂರು ಬಿಷಪ್ ಡಾ.ಪೀಟರ್ ಪಾಮ್ಲ ಸಲ್ದಾನ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಫಾ.ಮುಲ್ಲರ್ ಸ್ಕೂಲ್ ಆಫ್ ನರ್ಸಿಂಗ್, ಫಾ.ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್, ಫಾದರ್ ಮುಲ್ಲರ್ ಸ್ಪೀಚ್ ಅಂಡ್ ಹಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಏ.5ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ.
243 ವಿದ್ಯಾರ್ಥಿಗಳಿಗೆ ಪದವಿ
ಫಾ.ಮುಲ್ಲರ್ ಹೋಮಿಯೋಪಥಿ ಮಹಾವಿದ್ಯಾಲಯವು ಬಿಎಚ್ ಎಂಎಚ್ ಪದವಿಯಲ್ಲಿ 6 ರ್ಯಾಂಕ್ , ಎಂಡಿ(ಎಚ್ಒಎಂ)ಯಲ್ಲಿ 11 ರ್ಯಾಂಕ್ ಪಡೆದಿದೆ. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಪಿಜಿಯಲ್ಲಿ 5, ಎಂಬಿಬಿಎಸ್ 8, ಅಲೈಡ್ ಪಿಜಿ 14, ಅಲೈಡ್ ಯುಜಿ 19 ಮತ್ತು ಬಿಪಿಟಿಯಲ್ಲಿ 15 ರ್ಯಾಂಕ್ ಪಡೆದಿದೆ. ಸ್ಕೂಲ್ ಆಫ್ ನರ್ಸಿಂಗ್, ಕಾಲೇಜ್ ಆಫ್ ನರ್ಸಿಂಗ್, ಸ್ಪೀಚ್ ಆ್ಯಂಡ್ ಹಿಯರಿಂಗ್ನ ಒಟ್ಟು 243 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ ಎಂದು ಫಾ.ರಿಚರ್ಡ್ ಅಲೋಶಿಯಸ್ ಕುವೆಲ್ಲೊ ತಿಳಿಸಿದರು.
ಬಿಪಷ್ ಡಾ.ಪೀಟರ್ ಪಾನ್ಸ್ ಸಲ್ದಾನಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಫಾ.ಫೌಸ್ಟಿನ್ ಲ್ಯೂಕಸ್ ಲೋಬೊ, ಫಾ.ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಫಾ.ಅಜಿತ್ ಬಿ.ಮಿನೇಜಸ್, ಮೆಡಿಕಲ್ ಕಾಲೇಜು ಆಸ್ಪತ್ರೆ ಆಡಳಿತಾಧಿಕಾರಿ ಫಾ.ಜಾರ್ಜ್ ಜೀವನ ಸಿಕ್ವೆರಾ, ಡಾ.ಇಎಸ್ಜೆ ಪ್ರಭು ಕಿರಣ್, ಡಾ.ಗಿರೀಶ್ ನಾವಡ, ಭಗಿನಿ ಧನ್ಯಾ ದೇವಾಸಿಯಾ. ಪ್ರೊ.ಸಿಂಥಿಯಾ ಸಾಂತ್ಮಯೋರ್, ಡಾ.ಆ್ಯಂಟನಿ ಸಿಲ್ವನ್ ಡಿಸೋಜ, ಡಾ.ಉದಯ್ ಕುಮಾರ್, ಡಾ.ಹಿಲ್ಲಾ ಡಿಸೋಜ, ಪ್ರೊ.ಚೆರಿಷ್ಮಾ ಡಿಸಿಲ್ವಾ ಇದ್ದರು.