ಬ್ರಹ್ಮಾವರ, ಏ.04(DaijiworldNews/ AK):ಏಪ್ರಿಲ್ 4 ಶುಕ್ರವಾರ ಪೆಟ್ರಿ ಜಂಕ್ಷನ್ನಲ್ಲಿ ಬೈಕೊಂದು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತರನ್ನು ದೀಕ್ಷಿತ್ ಎಂದು ಗುರುತಿಸಲಾಗಿದ್ದು, ಅಭಿಷೇಕ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಸವಾರಿ ಮಾಡುತ್ತಿದ್ದ ಬೈಕ್ ಟಿಪ್ಪರ್ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ದೀಕ್ಷಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.