ಮಂಗಳೂರು, ಏ.04(DaijiworldNews/ AK):ಫೆಡರೆಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್, 30 ಜಿಲ್ಲಾ ಮದ್ಯ ಮಾರಾಟಗಾರರ ಅಸೋಸಿಯೇಷನ್ ಗಳ ಒಕ್ಕೂಟ, ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಮಂಗಳೂರು ಇದರ ವತಿಯಿಂದ ಎಲ್ಲಾ ವರ್ಗದ ಮದ್ಯ ಮಾರಾಟಗಾರ ಸನ್ನದುದಾರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಲ್ಲಾ ಕೇಂದ್ರಗಳಲ್ಲಿ ಸಾಂಕೇತಿಕ ಪ್ರತಿಭಟನೆ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನ ಮಂಗಳೂರು ತಾಲೂಕು ಅಧ್ಯಕ್ಷ ಕೆಟಿ ಸುವರ್ಣ, ಅಸೋಸಿಯೇಷನ್ನ ಬೇಡಿಕೆಗಳನ್ನು 2024ರ ನವೆಂಬರ್ ತಿಂಗಳಿನಲ್ಲಿ ಈಡೇರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು.
ಆದರೆ 5 ತಿಂಗಳು ಕಳೆದರೂ ಇನ್ನು ಕೂಡ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬಜೆಟ್ನಲ್ಲಿಯೂ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬೇಡಿಕೆಗಳು ಈಡೇರದಿದ್ದರೆ ಮುಂದೆ ಬೃಹತ್ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನ ಉಪಾಧ್ಯಕ್ಷ ಲೂಯಿ ಜೆ ಪಿಂಟೊ, ಅಸೋಸಿಯೇಷನ್ ನ ಪುತ್ತೂರು ತಾಲೂಕು ಅಧ್ಯಕ್ಷ ಪುರಂದರ ರೈ, ಜಿಲ್ಲಾ ಉಪಾಧ್ಯಕ್ಷ ನಾರಾಯಣ ಪಿಎಂ, ಜಿಲ್ಲಾ ಕಾರ್ಯದರ್ಶಿ ಸಿಎನ್ ಅಪ್ಪಚ್ಚು, ಜಿಲ್ಲಾ ಜೊತೆ ಕಾರ್ಯದರ್ಶಿ ಓಂಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.