ವಿಟ್ಲ, ಏ.06(DaijiworldNews/TA): ತುಳು ರಂಗ ಭೂಮಿ ಕಾಲವಿದ, ಶಾರದಾ ಆರ್ಟ್ಸ್ ಮಂಜೇಶ್ವರ ತಂಡದ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು.

ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇವರು ಪತ್ನಿ ಹಾಗು ಓರ್ವ ಮಗನನ್ನು ಅಗಲಿದ್ದಾರೆ. ವಿಟ್ಲದ ಕಲಾಭಿಮಾನಿಗಳು, ಸಹಕಲಾವಿದರು, ಕಲಾವಿದನ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಮೃತರ ಅಂತ್ಯಸಂಸ್ಕಾರ ನಾಳೆ ವಿಟ್ಲದಲ್ಲಿ ನಡೆಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.