ಕಾರ್ಕಳ, ಏ.08 (DaijiworldNews/AK): ಕಾರ್ಕಳ ಕ್ರೈಸ್ಟ್ ಕಿಂಗ್ ಪ್ರಿ ಯೂನಿವರ್ಸಿಟಿ ಕಾಲೇಜಿನ ಸುಧೀಕ್ಷಾ ಎಸ್ ಶೆಟ್ಟಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ರ್ಯಾಂಕ್ ಗಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 595 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.

ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಪತ್ರ ನಿರ್ವಹಣೆ ಮತ್ತು ಸಂಖ್ಯಾಶಾಸ್ತ್ರ ಎಂಬ ನಾಲ್ಕು ವಿಷಯಗಳಲ್ಲಿ ಸುಧೀಕ್ಷಾ 100 ಅಂಕಗಳನ್ನು ಗಳಿಸಿದ್ದಾರೆ. ಕಾರ್ಕಳದ ಜೋಡುರಸ್ತೆ ನಿವಾಸಿಗಳಾದ ಸುರೇಶ್ ಶೆಟ್ಟಿ ಮತ್ತು ಸುದರ್ಶಿನಿ ಶೆಟ್ಟಿ ದಂಪತಿಯ ಪುತ್ರಿ ಸುಧೀಕ್ಷಾ ಶೆಟ್ಟಿ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ್ತಿ.
ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಬೋಧಕ ಸಿಬ್ಬಂದಿ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.