ಬೆಳ್ತಂಗಡಿ, ಏ.12 (DaijiworldNews/AA): ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡ ರಾತ್ರಿಯ ವೇಳೆ ನಾರಾವಿ ಕುತ್ಲೂರಿನಲ್ಲಿ ನಡೆದಿದೆ.



ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ.
ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ಸವಾರನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವಕರು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಇವರಿಬ್ಬರು ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ 12 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ.
ವೇಣೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.