ಉಡುಪಿ, ಮೇ. 24 (DaijiworldNews/AA): ಕೆಪಿಸಿಸಿ ಮಹಿಳಾ ಕಾಂಗ್ರೆಸ್ ವಿಭಾಗದ ಪ್ರಧಾನ ಕಾರ್ಯದರ್ಶಿಗಳಾಗಿ ಗೀತಾ ವಾಗ್ಲೆ, ಅನಿತಾ ಡಿಸೋಜ ಬೆಳ್ಮಣ್ ಮತ್ತು ಭಾನು ಭಾಸ್ಕರ್ ಕಾರ್ಕಳ ಅವರು ನೇಮಕಗೊಂಡಿದ್ದಾರೆ.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ಶುಕ್ರವಾರ ಈ ನೇಮಕಾತಿ ಮಾಡಿದ್ದಾರೆ.
ಗೀತಾ ವಾಗ್ಲೆ ಈ ಹಿಂದೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. ಅವರು ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ತಳಮಟ್ಟದ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ್ದಾರೆ. ಅನಿತಾ ಡಿಸೋಜ ಅವರು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದು, ಪಕ್ಷದ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.