ಸುಳ್ಯ,ಮೇ. 26 (DaijiworldNews/ AK): ಕರಾವಳಿ ಭಾಗದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಹೀಗಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚನೆ ನೀಡಲಾಗಿದೆ.



ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಅಲ್ಲದೆ ದೇವಸ್ಥಾನದ ಆಡಳಿತ ಮಂಡಳಿ ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಿದೆ.