ಬಂಟ್ವಾಳ,ಮೇ. 27 (DaijiworldNews/AK): ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ.

ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕನ ಹನೀಫ ನ ಸಹೋದರ ರಹೀಂ ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.
ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೂ ಕಡಿಯಲಾಗಿದೆ . ಆದರೆ ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ .ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.