ಮಂಗಳೂರು/ಉಡುಪಿ, ಮೇ. 29 (DaijiworldNews/AK): ರಾಜ್ಯ ಸರ್ಕಾರವು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪೊಲೀಸ್ ನಾಯಕತ್ವದಲ್ಲಿ ಪ್ರಮುಖ ಬದಲಾವಣೆಗಳನ್ನು ಘೋಷಿಸಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರನ್ನು ವರ್ಗಾವಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಮಧ್ಯೆ, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಆರ್ಥಿಕ ಅಪರಾಧಗಳ ಉಪ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸುಧೀರಕುಮಾರ್ ರೆಡ್ಡಿ ಅಧಿಕಾರ ಸ್ವೀಕರಿಸಲಿದ್ದಾರೆ.