ಸುಳ್ಯ, ಜು. 03 (DaijiworldNews/TA): ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ರಜೆ ಘೋಷಿಸಿ ಆದೇಶ ನೀಡಿದ್ದಾರೆ. ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು,ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.

ರಜೆ ಘೋಷಿಸಿದ ಬಗ್ಗೆ ಸುಳ್ಯ ತಹಶೀಲ್ದಾರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎನ್ನಲಾಗಿದೆ. ಸುಳ್ಯ ತಾಲೂಕಿನಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಮಳೆ ಮುಂದುವರೆಯುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.