ಪುತ್ತೂರು, ಜು. 03 (DaijiworldNews/TA): ನಗರದ ಸಾಮೆತ್ತಡ್ಕ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮನೆಯ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಘಟನೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲವು ಜು.15 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.