ಮಂಗಳೂರು, ಜು. 03 (DaijiworldNews/AK): ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪದ ಮೇರೆಗೆ ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದ ಆಶಿಕ್ ಎಸ್. ಕೋಟ್ಯಾನ್ ಎಂಬಾತನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಈತನ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 85/2025 ಕಲಂ.196,353(2),351(3) ಭಾರತೀಯ ನ್ಯಾಯಾ ಸಂಹಿತೆ 2023 ಪ್ರಕರಣ ದಾಖಲಾಗಿದ್ದು, ತದನಂತರ ,ಮುಂದಿನ ತನಿಖೆಗೆ ಸೆನ್ ಕ್ರೈಂ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಪ್ರಕರಣದಲ್ಲಿ ಆರೋಪಿತನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾ ಗ್ರಾಂ ನಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ, ರಕ್ತಕ್ಕೆ ರಕ್ತವೇ ಉತ್ತರವಾಗಬೇಕು, ಜೀವಕ್ಕೆ ಜೀವವೇ ಬೇಕು “ ಎಂಬುದಾಗಿ ಸ್ಟೇಟಸ್ ಹಾಕಿದ್ದು, ಈತನನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.