ಪುತ್ತೂರು, ಜು. 06 (DaijiworldNews/AA): ಪೇಟೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಪಟ್ನೂರು ಸಮೀಪದ ಮುಂಡಾಜೆ ನಿವಾಸಿ ರೂಪಾ (19) ನಾಪತ್ತೆಯಾಗಿದ್ದ ವಿದ್ಯಾರ್ಥಿನಿ.
ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಕೆಯನ್ನು ಪತ್ತೆಹಚ್ಚಲು ಪೊಲೀಸರು ಸುತ್ತಮುತ್ತಲ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿದ್ದರು.
ಇದೀಗ ಆಕೆ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಪೊಲೀಸರು ಆಕೆಯನ್ನು ಪುತ್ತೂರಿಗೆ ಕರೆತಂದಿದ್ದಾರೆ ಎಂದು ವರದಿಯಾಗಿದೆ.