ಮಂಗಳೂರು, ಜು. 16 (DaijiworldNews/AA): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.17ರಂದು ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡುಬಿದಿರೆ, ಮೂಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಸಂಬಂಧಿಸಿದ ತಾಲೂಕು ತಹಸೀಲ್ದಾರ್ ಗಳು ಪ್ರಕಟಣೆ ಹೊರಡಿಸಿದ್ದಾರೆ.

ಈ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ನಾಳೆ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರರು ಘೋಷಣೆ ಮಾಡಿದ್ದಾರೆ.