ಮಂಗಳೂರು, ಜು. 17 (DaijiworldNews/AK): ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ಕಳೆದ ರಾತ್ರಿ ಮತ್ತು ಇಂದು ಬೆಳಗ್ಗೆ ಸುರಿದ ಭಾರೀ ಮಳೆಗೆ ಮೇರಿಹಿಲ್ ಬಳಿ ತಡೆ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.







ಸುಮಾರು 8 ರಿಂದ 10 ದ್ವಿಚಕ್ರ ವಾಹನಗಳು ಮತ್ತು ಗೋಡೆಯ ಕೆಳಗೆ ನಿಲ್ಲಿಸಿದ್ದ ಒಂದು ಕಾರು ಹಾನಿಗೊಳಗಾಗಿವೆ. ಅದೃಷ್ಟವಶಾತ್, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ಇನ್ನು ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಇರುವುದರಿಂದ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿ ವಿನಂತಿಸಲಾಗಿದೆ.
ಇನ್ನು ಕೊಟ್ಟಾರ ಚೌಕಿಯಲ್ಲಿ ಹಲವು ಅಂಗಡಿಗಳಿಗೆ ನೆರೆ ನೀರು ನುಗ್ಗಿದೆ.