ಬಂಟ್ವಾಳ, ಜು. 19 (DaijiworldNews/TA): ಬಂಟರ ಸಂಘ ಬಂಟವಾಳ ತಾಲೂಕು (ರಿ) ಇದರ 2025-28 ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಜಗನ್ನಾಥ ಚೌಟ ಮಾಣಿ ಇವರು ಆಯ್ಕೆಯಾಗಿದ್ದಾರೆ. ಪ್ರಗತಿಪರ ಕೃಷಿಕರಾಗಿರುವ ಇವರು , ಜಿಲ್ಲೆಯ ಹಲವಾರು ದೈವಸ್ಥಾನ ದೇವಸ್ಥಾನಗಳ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವದಲ್ಲಿ ಧಾರ್ಮಿಕವಾಗಿ ತೊಡಗಿಸಿಕೊಂಡದ್ದು ಮಾತ್ರವಲ್ಲದೆ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಕೂಡ ಸೇವೆ ಸಲ್ಲಿಸುತ್ತಿದ್ದಾರೆ.

ಉಪಾಧ್ಯಕ್ಷರಾಗಿ ಐತಪ್ಪ ಆಳ್ವ ಸುಜೀರುಗುತ್ತು, ಕಾರ್ಯದರ್ಶಿಯಾಗಿ ಸದಾನಂದ ಆಳ್ವ ಕಂಪ, ಕೋಶಾಧಿಕಾರಿಯಾಗಿ ಲೋಕೇಶ್ ಶೆಟ್ಟಿ ಕುಳ, ಜೊತೆಕಾರ್ಯದರ್ಶಿಯಾಗಿ ಶಿವಪ್ರಸಾದ್ ಶೆಟ್ಟಿ ಸಜೀಪ, ಜೊತೆಕೋಶಾಧಿಕಾರಿಯಾಗಿ ಶ್ರೀಮತಿ ಶ್ರಿವಿದ್ಯಾ ಎ. ರೈ ಬಿ.ಸಿ.ರೋಡ್ ರವರು ಆಯ್ಕೆಯಾದರು. ಸಂಘದ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿಯವರು ಹಾಗೂ ಅವರ ತಂಡ ನೂತನವಾಗಿ ಆಯ್ಕೆಯಾದ ಸಮಿತಿ ಸದಸ್ಯರಿಗೆ ಹಾಗೂ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಮುಖ್ಯ ಚುನಾವಣಾಧಿಕಾರಿಗಳಾದ ಕಿರಣ್ ಹೆಗ್ಡೆ ಅನಂತಾಡಿ , ಚುನಾವಣಾಧಿಕಾರಿಗಳಾದ ವಿವೇಕ್ ಶೆಟ್ಟಿ ನಗ್ರಿಗುತ್ತು,ಲೋಕನಾಥ್ ಶೆಟ್ಟಿ ಬಿ.ಸಿ. ರೋಡ್, ಶಾಂತಾರಾಮ್ ಶೆಟ್ಟಿ ಬೋಳಂತೂರು ಉಪಸ್ಥಿತರಿದ್ದರು. ಜು.27 ರಂದು ನಡೆಯುವ ಸಂಘದ ಮಹಾಸಭೆಯಲ್ಲಿ ಅಧಿಕಾರ ಹಸ್ತಾಂತರ ಮಾಡಲಾಗುವುದು ಎಂದು ಬಂಟರ ಸಂಘದ ಹಾಲಿ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ತಿಳಿಸಿದ್ದಾರೆ.