ಉಡುಪಿ, ಜು. 20 (DaijiworldNews/AA): ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುಟ್ಲುಪಾಡಿ ಪರಿಸರದಲ್ಲಿ ಹಲವಾರು ದಿನಗಳಿಂದ ಒಂಟಿ ಸಲಗ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.



ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿರುವ ಈ ಗ್ರಾಮದಲ್ಲಿ ಕೃಷಿಕರಿಗೆ ಕಾಡುಪ್ರಾಣಿಗಳ ಹಾವಳಿ ಸರ್ವೇ ಸಾಮಾನ್ಯವಾಗಿದೆ. ಜು.18ರ ಮುಂಜಾನೆ ಕೃಷಿಕ ನಾಗಯ್ಯ ನಾಯ್ಕ್ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಕಂಗು, ಬಾಳೆ ಹಾಗೂ ತೋಟದ ತಡೆಗೋಡೆಯನ್ನು ದ್ವಂಸ ಗೊಳಿಸಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
ಕಾಡನೆಯ ಹಾವಳಿ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಪಂದಿಸಿದ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.