ಉಡುಪಿ, ಜು. 20 (DaijiworldNews/AA): ಉಡುಪಿ ನಗರ ಪೊಲೀಸ್ ಠಾಣೆ ಸಮೀಪದ ಕಂದಾಯ ಇಲಾಖೆಯ ಸರ್ಕಾರಿ ವಸತಿ ಸಮುಚ್ಛಯದಲ್ಲಿ ಜುಲೈ 19 ರ ತಡರಾತ್ರಿಯಿಂದ ಭಾನುವಾರ ಮುಂಜಾನೆಯ ನಡುವೆ ಕಳ್ಳತನ ನಡೆದಿದೆ.
.jpg)




ವಸತಿ ಸಮುಚ್ಛಯದ ಆವರಣದಲ್ಲಿನ ಸಿಸಿಟಿವಿ ದೃಶ್ಯಾವಳಿಯ ಪ್ರಕಾರ, 3 ರಿಂದ 4 ದುಷ್ಕರ್ಮಿಗಳ ಗುಂಪು ಈ ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಕಳ್ಳರು ಕನಿಷ್ಠ ಮೂರು ಮನೆಗಳಿಗೆ ನುಗ್ಗಿ, ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ ಎಂದು ವರದಿಯಾಗಿದೆ.
ಈ ವಸತಿ ಸಮುಚ್ಛಯದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಸುಮಾರು ಒಂದು ವರ್ಷದ ಹಿಂದೆ ಇದೇ ವಸತಿ ಸಮುಚ್ಛಯಕ್ಕೆ ನುಗ್ಗಿದ ಕಳ್ಳರು, ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದಿದ್ದರು. ಆ ಸಮಯದಲ್ಲಿ ಇಲ್ಲಿ ಸಿಸಿಟಿವಿ ಕಣ್ಗಾವಲು ಇರಲಿಲ್ಲ. ಆ ಘಟನೆಯ ನಂತರ, ನಿವಾಸಿಗಳೇ ಸೇರಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ವರ್ಷದ ಹಿಂದಿನ ಕಳ್ಳತನ ಪ್ರಕರಣದ ಆರೋಪಿಗಳನ್ನು ಇನ್ನೂ ಪತ್ತೆಯಾಗಿಲ್ಲ. ಅದಾಗಲೇ ಮತ್ತೊಮ್ಮೆ ಕಳ್ಳತನ ನಡೆದಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.