ಉಡುಪಿ, ಆ. 04 (DaijiworldNews/AA): ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಅವರು ಮರು ನೇಮಕಗೊಂಡಿದ್ದಾರೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರ ಶಿಫಾರಸಿನ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಹರೀಶ್ ಕಿಣಿ ಅವರು ಈ ಹಿಂದೆ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ಉಡುಪಿ ಜಿಲ್ಲಾ ಸಹಕಾರಿ ಒಕ್ಕೂಟದ ನಿರ್ದೇಶಕರಾಗಿ ಮತ್ತು ಉಡುಪಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.