ಉಡುಪಿ, ಆ. 04 (DaijiworldNews/AA): ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿ ಬಿದ್ದಿದ್ದು, ಅದರಲ್ಲಿದ್ದ ಏಳು ಮೀನುಗಾರರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ಹೌಸ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.



ಮೀನುಗಾರಿಕೆಗಾಗಿ ಮಲ್ಪೆಯಿಂದ ತೆರಳಿದ್ದ ಟ್ರಾಲ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ಕೂಡಲೇ ಸ್ಥಳಿಯ ಮೀನುಗಾರರಾದ ಪ್ರಶಾಂತ್ ಮತ್ತು ವಿನೋದ್ ದೋಣಿಯಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.
ಈ ಘಟನೆ ಕಾಪು ಕರಾವಳಿಯಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಮೀನುಗಾರರ ಸಮಯಪ್ರಜ್ಞೆಯಿಂದ ಉಡುಪಿ ಕರಾವಳಿ ನೀರಿನಲ್ಲಿ ಸಂಭವಿಸಬಹುದಾದ ದೊಡ್ಡ ದುರಂತ ತಪ್ಪಿದಂತಾಗಿದೆ.