ಬಂಟ್ವಾಳ, ಆ. 11 (DaijiworldNews/AA): ಮೇ 27ರಂದು ನಡೆದ ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಬಂಧಿಸಿದ್ದಾರೆ.

ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಿದ್ದು, ಅವರೆಲ್ಲರನ್ನೂ ಹಲವು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣದ ತನಿಖೆ ನಡೆಯುತ್ತಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.