ಉಡುಪಿ, ಆ. 19 (DaijiworldNews/AK): ಮಣಿಪಾಲ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.


ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ರಸ್ತೆ ವಿಭಜಕಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಬೈಕ್ ನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಅಪಘಾತದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.